HomeLatest NewsSHOCKING: ರಸ್ತೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವು

SHOCKING: ರಸ್ತೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಘಾತದಿಂದ 15 ವರ್ಷ ಬಾಲಕ ಸಾವನ್ನಪ್ಪಿದ್ದಾನೆ.

ಪ್ರೀತಮ್(15) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪ್ರೀತಮ್ ಗೆ ಎದೆನೋವು ಕಾಣಿಸಿಕೊಂಡು ಏಕಾಏಕಿ ರಸ್ತೆಯಲ್ಲಿ ಕುಸಿದು ಬಿದ್ದಿದ್ದಾನೆ. ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular