HomeLatest NewsBREAKING: ಪ್ರಧಾನಿ ಮೋದಿ ಕಾರ್ಯಕ್ರಮ ವೇದಿಕೆಯಲ್ಲಿ ಆರ್. ಅಶೋಕ್, ಸಂಸದ ಮಂಜುನಾಥ್, ಸಚಿವ ಬೈರತಿ ಸುರೇಶ್...

BREAKING: ಪ್ರಧಾನಿ ಮೋದಿ ಕಾರ್ಯಕ್ರಮ ವೇದಿಕೆಯಲ್ಲಿ ಆರ್. ಅಶೋಕ್, ಸಂಸದ ಮಂಜುನಾಥ್, ಸಚಿವ ಬೈರತಿ ಸುರೇಶ್ ಗೂ ಅವಕಾಶ

ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಇಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಸಂಸದ ಡಾ. ಮಂಜುನಾಥ್, ಸಚಿವ ಬೈರತಿ ಸುರೇಶ್ ಅವರಿಗೆ ಅವಕಾಶ ನೀಡಲಾಗಿದೆ. ಹಳದಿ ಮಾರ್ಗವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಮೆಟ್ರೋ ಮೂರನೇ ಹಂತದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಆಡಿಟೋರಿಯಂನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ವೇದಿಕೆಯಲ್ಲಿ 13 ಗಣ್ಯರಿಗೆ ಅವಕಾಶ ನೀಡಲಾಗಿದೆ. ನಿನ್ನೆ 10 ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇಂದು ಕಾರ್ಯಕ್ರಮದ ವೇದಿಕೆಯಲ್ಲಿನ ಗಣ್ಯರ ಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಪಟ್ಟಿಯಲ್ಲಿ ಆರ್. ಅಶೋಕ್, ಡಾ. ಮಂಜುನಾಥ್, ಸಚಿವ ಬೈರತಿ ಸುರೇಶ್ ಹೆಸರು ಸೇರ್ಪಡೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೇದಿಕೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಮನೋಹರ್ ಲಾಲ್, ಅಶ್ವಿನಿ ವೈಷ್ಣವ್, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿರುವರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular