HomeLatest Newsಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ, ನಾಲ್ವರು ಗಂಭೀರ

ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ, ನಾಲ್ವರು ಗಂಭೀರ

ಚಿಕ್ಕಮಗಳೂರು: ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಚಿಕ್ಕಮಗಳೂರು ನಗರದ ಪೊಲೀಸ್ ಬಡಾವಣೆಯಲ್ಲಿರುವ ಆಲ್ದೂರು ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಅಸ್ವಸ್ಥರಾದ ವಿದ್ಯಾರ್ಥಿಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ರಾತ್ರಿ ಊಟ ಮಾಡಿದ ನಂತರ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿದ್ದು, ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಊಟದಲ್ಲಿ ಹುಳಗಳು ಪತ್ತೆಯಾಗಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular