ಚಿಕ್ಕಮಗಳೂರು: ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಸವಾರರು ಕೆಳಗೆ ಬಿದ್ದಿದ್ದಾರೆ. ಹೀಗೆ ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದಿದೆ.
55 ವರ್ಷದ ಸುಮಾ ಬಸ್ ಹರಿದು ಮೃತಪಟ್ಟಿದ್ದಾರೆ. ತರೀಕೆರೆ ಪಟ್ಟಣದ ಸುಮಾ ಬೈಕ್ ನಿಂದ ಬಿದ್ದಾಗ ಬಸ್ ಹರಿದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಬಿ ಹೆಚ್ ರಸ್ತೆಯಲ್ಲಿ ಘಟನೆ ನಡೆದಿದೆ. ಅಪಘಾತದ ನಂತರ ಬಸ್ ನಿಲ್ಲಿಸದೆ ಚಾಲಕ ತೆರಳಿದ್ದಾನೆ. ಅಪಘಾತದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.