HomeLatest Newsಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ: 9ನೇ ತರಗತಿಗೆ ಓಪನ್ ಬುಕ್ ಪರೀಕ್ಷೆ ಜಾರಿ: ಸಿಬಿಎಸ್ಇ...

ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ: 9ನೇ ತರಗತಿಗೆ ಓಪನ್ ಬುಕ್ ಪರೀಕ್ಷೆ ಜಾರಿ: ಸಿಬಿಎಸ್ಇ ಘೋಷಣೆ

ನವದೆಹಲಿ: 2026- 27ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ 9ನೇ ತರಗತಿ ವಿದ್ಯಾರ್ಥಿಗಳಿಗೆ ತೆರೆದ ಪುಸ್ತಕ(ಓಪನ್ ಬುಕ್) ಪರೀಕ್ಷೆ ಜಾರಿಗೊಳಿಸಲು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ಸಿಬಿಎಸ್ಇ ನಿರ್ಧಾರ ಕೈಗೊಂಡಿದೆ.

ಈ ಹೊಸ ನೀತಿ ಜಾರಿಯಾದಲ್ಲಿ ವಿದ್ಯಾರ್ಥಿಗಳು ಪಠ್ಯಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ.

ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು -2023 ರಾಷ್ಟ್ರೀಯ ಶಿಕ್ಷಣ ನೀತಿ 2020ರ ಸಮನ್ವಯದೊಂದಿಗೆ ಹೊಸ ಪಠ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಳೆಯ ಪರೀಕ್ಷಾ ಪದ್ಧತಿ ಕಂಠಪಾಠಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಹೊಸ ನೀತಿಯು ಸಾಮರ್ಥ್ಯ ಆಧಾರಿತ ಕಲಿಕೆಗೆ ಮಹತ್ವ ಕೊಡುತ್ತದೆ. ಮುಖ್ಯ ಕಲಿಕಾ ವಿಷಯಗಳಾದ ಭಾಷೆ, ಗಣಿತ, ವಿಜ್ಞಾನ ಸಮಾಜ ವಿಜ್ಞಾನವನ್ನು ಇದು ಒಳಗೊಳ್ಳಲಿದೆ. ಈ ಕ್ರಮವನ್ನು ಆಯ್ಕೆ ಮಾಡಿಕೊಳ್ಳುವ ಅಥವಾ ಬಿಡುವ ಸ್ವಾತಂತ್ರ್ಯವನ್ನು ಶಾಲೆಗಳಿಗೇ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular