HomeLatest NewsRAIN ALERT: ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

RAIN ALERT: ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಆಗಸ್ಟ್ 17ರವರೆಗೂ ಭಾರಿ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಮಳೆ ಅಬ್ಬರ ಜೋರಾಗಿದೆ.

ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular