ತುಮಕೂರು : ತುಮಕೂರಿನಲ್ಲಿ ಮಹಿಳೆಯನ್ನು ಕೊಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತ ಮಹಿಳೆಯ ಅಳಿಯನೇ ಈ ಹತ್ಯೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ.
ವೃತ್ತಿಯಲ್ಲಿ ದಂತ ವೈದ್ಯನಾಗಿದ್ದ ಡಾ.ರಾಮಚಂದ್ರ ತನ್ನ ಸ್ನೇಹಿತ ಸತೀಶ್ ಹಾಗೂ ಕಿರಣದ ಜೊತೆ ಸೇರಿ ಹತ್ಯೆ ಮಾಡಿದ್ದಾನೆ. ಕೊಲೆಯಾದ ಮಹಿಳೆ ಲಕ್ಷ್ಮೀದೇವಮ್ಮ ತನ್ನ ಮಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದಳು ಎಂಬ ಆರೋಪವಿದ್ದು, ಈ ಕಾರಣಕ್ಕೆ ಅಳಿಯ ರಾಮಚಂದ್ರ ಸ್ನೇಹಿತರ ಜೊತೆ ಸೇರಿ ಅತ್ತೆಯನ್ನೇ ಕೊಲೆ ಮಾಡಿ ದೇಹವನ್ನು ತುಂಡರಿಸಿ ಎಸೆದಿದ್ದರು. ನಂತರ ಆರೋಪಿಗಳು ಧರ್ಮಸ್ಥಳಕ್ಕೆ ಎಸ್ಕೇಪ್ ಆಗಿದ್ದರು. ವಿಚಾರಣೆ ನಡೆಸಿದ ಕೊರಟಗೆರೆ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಇತ್ತೀಚೆಗೆ ತುಮಕೂರು ಜಿಲ್ಲೆಯ ಕೊರಟಗೆರೆ ಬಳಿ ರಸ್ತೆಯುದ್ದಕ್ಕೂ ಕವರ್ ನಲ್ಲಿ ಶವದ ತುಂಡುಗಳು ಪತ್ತೆಯಾಗಿತ್ತು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಕೊರಟಗೆರೆಯ ಕೋಳಾಲದ ಮುತ್ಯಾಲಮ್ಮ ದೇವಾಲಯದ ಬಳಿಯಿರುವ ರಸ್ತೆಯಲ್ಲಿ ಐದು ಕಡೆ ಮೃತದೇಹದ ತುಂಡುಗಳು ಪತ್ತೆಯಾಗಿತ್ತು. 3 ಕಿ.ಮೀ ಅಂತರದಲ್ಲಿ 5 ಕಡೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿದ್ದು, ಮೃತದೇಹದ ತುಂಡುಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದ್ದರು.