HomeLatest NewsBREAKING : ಚಾಲಕನ ಆತ್ಮಹತ್ಯೆ ಕೇಸ್ : 'FIR' ರದ್ದುಕೋರಿ ಹೈಕೋರ್ಟ್ ಮೊರೆ ಹೋದ ಸಂಸದ...

BREAKING : ಚಾಲಕನ ಆತ್ಮಹತ್ಯೆ ಕೇಸ್ : ‘FIR’ ರದ್ದುಕೋರಿ ಹೈಕೋರ್ಟ್ ಮೊರೆ ಹೋದ ಸಂಸದ ಡಾ.ಕೆ ಸುಧಾಕರ್.!

ಚಿಕ್ಕಬಳ್ಳಾಪುರ : ಜಿಲ್ಲಾಪಂಚಾಯತ್ ಚಾಲಕ ಬಾಬು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ರದ್ದು (FIR) ಕೋರಿ ಸಂಸದ ಡಾ.ಕೆ ಸುಧಾಕರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಸುಧಾಕರ್ ಅವರ ವಕೀಲರು ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆಗೆ ಅವರು ಮನವಿ ಮಾಡಿದ್ದಾರೆ.ಸಂಸದ ಸುಧಾಕರ್ ಹಾಗೂ ಬೆಂಬಲಿಗರ ಹೆಸರು ಬರೆದಿಟ್ಟು ಬಾಬು ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದರು. ಬಾಬು ಪತ್ನಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸದ ಡಾ.ಕೆ ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅಟ್ರಾಸಿಟಿ ಕೇಸ್ ಕೂಡ ದಾಖಲಿಸಲಾಗಿದೆ. ಸಂಸದ ಸುಧಾಕರ್ ಎ1 ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಎಫ್ಐಆರ್ ನಲ್ಲಿ ನಾಗೇಶ್ ಹಾಗೂ ಮಂಜುನಾಥ್ ಹೆಸರನ್ನು ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular