ಧರ್ಮಸ್ಥಳ : ಧರ್ಮಸ್ಥಳ ಕೇಸ್ ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಎಂಟ್ರಿಕೊಟ್ಟಿದೆ.
ಬೆಳ್ತಂಗಡಿಯ ಎಸ್ ಐ ಟಿ ಕಚೇರಿಗೆ ಇಂದು ಭೇಟಿ ನೀಡಲಿರುವ ಆಯೋಗ ಅಸ್ಥಿಪಂಜರ ಪತ್ತೆ ಬಗ್ಗೆ ಮಾಹಿತಿ ಪಡೆಯಲಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಪ್ರಕರಣದ ತನಿಖೆಗೆ ಇಳಿದ ಮಾನವ ಹಕ್ಕುಗಳ ಆಯೋಗ ಇಂದು ಬೆಳ್ತಂಗಡಿಯ ಎಸ್ ಐ ಟಿ ಕಚೇರಿಗೆ ಭೇಟಿ ನೀಡಿ ಅಸ್ಥಿಪಂಜರ ಹಾಗೂ ಮೂಳೆಗಳು ಪತ್ತೆಯಾದ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ.
ಪ್ರಕರಣದ ಮಹತ್ವದ ಬೆಳವಣಿಗೆಯಲ್ಲಿ ಧರ್ಮಸ್ಥಳದಲ್ಲಿ ಶವವಾಗಿ ಸಿಕ್ಕಿದ್ದ ಪದ್ಮಲತಾ ಕೇಸ್ ಮರುತನಿಖೆ ಮಾಡಿ ಎಂದು ಅವರ ಸಹೋದರಿ ಎಸ್ ಐ ಟಿಗೆ ದೂರು ಸಲ್ಲಿಸಿ ಆಗ್ರಹಿಸಿದ್ದಾರೆ.
ಧರ್ಮಸ್ಥಳದಲ್ಲಿ ಪದ್ಮಲತಾ ಅಸಹಜ ಸಾವು ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಅವರ ಸಹೋದರಿ ಎಸ್ ಐ ಟಿಗೆ ದೂರು ಸಲ್ಲಿಸಿ ಮರು ತನಿಖೆಗೆ ಆಗ್ರಹಿಸಿದ್ದಾರೆ. ಧರ್ಮಸ್ಥಳದಲ್ಲಿ 38 ವರ್ಷಗಳ ಹಿಂದೆ ಅಸಹಜವಾಗಿ ಸಾವನ್ನಪ್ಪಿರುವ ಪದ್ಮಲತಾ ಕೊಲೆ ಕೇಸ್ ಮರು ತನಿಖೆಗೆ ಆಗ್ರಹಿಸಿದ್ದಾರೆ. ಎಸ್ಐಟಿ ಕಚೇರಿಗೆ ದೂರರ್ಜಿಯೊಂದಿಗೆ ಬಂದ ಪದ್ಮಲತಾ ಸಹೋದರಿ ಇಂದ್ರಾವತಿ ಮರು ತನಿಖೆಗೆ ಆಗ್ರಹಿಸಿದ್ದಾರೆ. 38 ವರ್ಷಗಳ ಹಿಂದೆ ನೇತ್ರಾವತಿ ನದಿ ತೀರದಲ್ಲಿ ಪದ್ಮಲತಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬೋಳಿಯಾರ್ ನಿವಾಸಿ ಪದ್ಮಲತಾ ಸಹೋದರಿ ಇಂದ್ರಾವತಿ ಪ್ರಕರಣದ ಮರು ತನಿಖೆ ಆಗಬೇಕೆಂದು ದೂರು ಸಲ್ಲಿಸಿದ್ದಾರೆ.