BREAKING: ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ವಿವಿಧ ಜಿಲ್ಲೆಗಳಲ್ಲಿ ಭುಗಿಲೆದ್ದ ಪ್ರತಿಭಟನೆ

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ಹಿನ್ನೆಲೆಯಲ್ಲಿ ಎಸ್ ಐಟಿ ತಂಡ ತನಿಖೆ ಚುರುಕುಗೊಳಿಸಿದೆ. ದೂರುದಾರ ತೋರಿಸುತ್ತಿರುವ ವಿವಿಧ ಜಾಗಗಳಲ್ಲಿ ಮಣ್ಣು ಅಗೆದು ಅಸ್ಥಿಪಂಜರಕ್ಕಾಗಿ ಶೋಧ ನಡೆಸಲಾಗುತ್ತಿದೆ. ಈ ನಡುವೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಧಾರವಾಡ, ಶಿವಮೊಗ್ಗ, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಜನರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅಪಪ್ರಚಾರ ನಡೆಸುವ ಮೂಲಕ ಧರ್ಮಸ್ಥ ಕ್ಷೇತ್ರದ ಬಗ್ಗೆ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ 5 ಸಾವಿರ ಜನರು ಪಾಲ್ಗೊಂಡಿದ್ದು, ಮಾನವಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡಿದ್ದು, ಅಲ್ಲಿಯೂ 5 ಸಾವಿರ ಜನರು ಪ್ರತಿಭಟನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read