ಬೆಂಗಳೂರು : ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ (K.N Rajanna) ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಭೇಟಿ ನಂತರ ಈ ಕುರಿತು ಸ್ಪಷ್ಟನೆ ನೀಡುತ್ತೇನೆ ಎಂದು ಅವರು ಹೇಳಿದರು .ಹೈಕಮಾಂಡ್ ಯಾವ ವಿಚಾರಕ್ಕೆ ಗರಂ ಆಗಿದೆ ಗೊತ್ತಿಲ್ಲ ಎಂದರು.ಸಿಎಂ ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲಿಯೇ ಅವರನ್ನು ಭೇಟಿಯಾಗುವೆ . ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಅವರು ಹೇಳಿದರು.
ನಾನು ಅಧಿಕಾರಕ್ಕೆ ಅಂಟಿಕೊಂಡು ಕೂರುವವನಲ್ಲ. ಸಂಜೆಯೊಳಗೆ ಎಲ್ಲಾದಕ್ಕೂ ಉತ್ತರ ನೀಡುತ್ತೇನೆ ಎಂದರು. ಸಿಎಂ ಭೇಟಿ ಬಳಿಕ ಎಲ್ಲಾದಕ್ಕೂ ಸ್ಪಷ್ಟನೆ ನೀಡುತ್ತೇನೆ ಎಂದು ಹೇಳಿದರು.