BIG NEWS: ಸೆಪ್ಟೆಂಬರ್ ನಲ್ಲಿ ‘ಕ್ರಾಂತಿ’ಯಾಗಲಿದೆ ಎಂದು ಚರ್ಚೆಗೆ ಕಾರಣರಾಗಿದ್ದ ನಾಯಕ: ಈಗ ಆಗಸ್ಟ್ ನಲ್ಲಿಯೇ ರಾಜಣ್ಣ ಅವರದ್ದೇ ತಲೆದಂಡ!

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ.

ಈ ಹಿಂದೆ ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಕ್ರಾಂತಿಯಾಗಲಿದೆ ಎಂಬ ಹೇಳಿಕೆ ನೀಡುವ ಮೂಲಕ ಭಾರಿ ಚರ್ಚೆಗೆ ಕಾರಣರಾಗಿದ್ದ ಕೆ.ಎನ್.ರಾಜಣ್ಣ, ಇದೀಗ ಆಗಸ್ಟ್ ನಲ್ಲಿಯೇ ಅವರದ್ದೇ ಸಚಿವ ಸ್ಥಾನದ ತಲೆದಂಡವಾಗಿರುವುದು ವಿಪರ್ಯಾಸ.

ಕೆ.ಎನ್.ರಾಜಣ್ಣ ಈ ಹಿಂದೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕು ಎಂದು ಬಹಿರಂಗವಾಗಿ ಆಗ್ರಹಿಸಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸಭೆ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ್ದರು. ಮತಗಳ್ಳತನದ ವಿರುದ್ಧ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿರುವ ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದರು.

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನದ ಬಗ್ಗೆ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಅಕ್ರಮದ ವಿರುದ್ಧ ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಅಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಕೆ.ಎನ್.ರಾಜಣ್ಣ, ಲೋಕಸಭಾ ಚುನಾವಣೆ ವೇಳೆ ನಮ್ಮದೇ ಸರ್ಕಾರ ಇದ್ದಿದ್ದು, ಮಹದೇವಪುರದಲ್ಲಿ ನಮ್ಮ ಲೋಪವಿದೆ ಎಂದಿದ್ದರು. ಈ ಹೇಳಿಕೆ ಹೈಕಮಾಂಡ್ ನಾಯಕರ ಕೆಂಗಣ್ಣಿಗೆ ಕಾರಣವಗಿತ್ತು. ಇದೇ ಕಾರಣವನ್ನು ಮುಂದಿಟ್ಟು ಇದೀಗ ಹೈಕಾಮಾಂಡ್ ರಾಜಣ್ಣ ಅವರ ರಾಜೀನಾಮೆ ಪಡೆದಿದೆ ಎನ್ನಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read