ಬೆಂಗಳೂರು: ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ ಅಂತಾ ಸಿಎಂ ಇನ್ನೂ ಹೇಳಿಲ್ಲ. ಹೈಕಮಾಂಡ್ ನಿಂದ ಯಾವುದೇ ನಿರ್ದೇಶನ ಬಂದಿಲ್ಲ. ವಿಷಯ ಮಾದ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ರಾಜಣ್ಣ ಸದನದಲ್ಲಿ ಇದ್ದಾರೆ. ಹೊರಬಂದ ಬಳಿಕ ಮಾತನಾಡುತ್ತಾರೆ ಎಂದಿದ್ದಾರೆ.
ರಾಜಣ್ಣ ಮಹದೇವಪುರ ಚುನಾವಣಾ ಅಕ್ರಮದ ಬಗ್ಗೆ ಮಾತನಾಡಿಲ್ಲ. ಪ್ರಕ್ರಿಯೆ ಬಗ್ಗೆ ಮಾತ್ರ ಅವರು ಹೇಳಿದ್ದಾರೆ. ರಾಹುಲ್ ಗಾಂಧಿಯವರು ಚುನಾವಣಾ ಆಯೋಗದ ವಿರುದ್ಧ ಹೋರಾಡುತ್ತಿದ್ದಾರೆ. ಅವರಿಗೆ ದೇಶದಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಿದರು.
You Might Also Like
TAGGED:ಪ್ರಿಯಾಂಕ್ ಖರ್ಗೆ