HomeLatest NewsBREAKING: ನನ್ನನ್ನು ವಜಾ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರ, ಪಿತೂರಿ ಇದೆ: ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ...

BREAKING: ನನ್ನನ್ನು ವಜಾ ಮಾಡಿರುವುದರ ಹಿಂದೆ ದೊಡ್ಡ ಷಡ್ಯಂತ್ರ, ಪಿತೂರಿ ಇದೆ: ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ ಗುಡುಗಿದ ಕೆ.ಎನ್. ರಾಜಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನನ್ನನ್ನು ವಜಾ ಮಾಡಿರುವುದರ ಹಿಂದೆ ಒಂದು ಷಡ್ಯಂತ್ರವಿದೆ. ಇದರ ಹಿಂದೆ ಒಂದು ದೊಡ್ಡ ಷಡ್ಯಂತ್ರ, ಪಿತೂರಿ ಇದೆ. ಯಾರ್ಯಾರು ಏನೇನು ಮಾಡಿದ್ದಾರೆ ಎಂದು ಕಾಲ ಬಂದಾಗ ನಾನು ಎಲ್ಲವನ್ನು ಹೇಳುತ್ತೇನೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ತಪ್ಪು ಗ್ರಹಿಕೆಯಾಗಿರಬಹುದು, ದೆಹಲಿಗೆ ಹೋಗಿ ವರಿಷ್ಠರ ಭೇಟಿ ಮಾಡ್ತೇನೆ ಎಂದು ಸಂಪುಟದಿಂದ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್. ರಾಜಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಿಮ್ಮ ಮುಂದೆ ಈಗ ಮಾಜಿ ಸಚಿವನಾಗಿ ಮಾತನಾಡಲು ಬಂದಿದ್ದೇನೆ. ಸನ್ಮಾನ್ಯ ಸಿದ್ದರಾಮಯ್ಯ ಮಂತ್ರಿಯಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದರು. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈಗಿನ ಬೆಳವಣಿಗೆ ಬಗ್ಗೆ ದೆಹಲಿಗೆ ಹೋಗಿ ಪಕ್ಷದ ವರಿಷ್ಠರನ್ನು ಭೇಟಿ ಮಾಡ್ತೇನೆ ರಾಜಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷದ ವರಿಷ್ಠರಿಗೆ ತಪ್ಪು ಗ್ರಹಿಕೆಯಾಗಿರಬಹುದು. ಅದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತೇನೆ. ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕರು. ಮತಗಳ್ಳತನ ಬಗ್ಗೆ ಅವರು ಹೋರಾಟ ನಡೆಸುತ್ತಿದ್ದು, ಅವರಿಗೆ ನಮ್ಮೆಲ್ಲರ ಬೆಂಬಲ ಇದೆ. ರಾಹುಲ್ ಗಾಂಧಿ, ವೇಣುಗೋಪಾಲ್, ಸುರ್ಜೇವಾಲಾ ಅವರಿಗೆ ತಪ್ಪು ಗ್ರಹಿಕೆಯಾಗಿರಬಹುದು. ಅದನ್ನು ತಿಳಿಸಲು ದೆಹಲಿಗೆ ಹೋಗಿ ಭೇಟಿ ಮಾಡುತ್ತೇನೆ. ನನ್ನೊಂದಿಗೆ ಕೆಲವು ಸಚಿವರು, ಶಾಸಕರು ಬರುತ್ತಾರೆ. ತಪ್ಪು ಗ್ರಹಿಕೆ ನಿವಾರಿಸುವ ಪ್ರಯತ್ನ ಮಾಡುತ್ತೇನೆ. ನಾವು ಏನೇ ಮಾತನಾಡಿದರೂ ಅಂತಿಮವಾಗಿ ಹೈಕಮಾಂಡ್ ಮತ್ತು ಪಕ್ಷದ ನಿರ್ಧಾರಕ್ಕೆ ಬದ್ಧವಾಗಿರುತ್ತೇವೆ. ಇದು ಪಕ್ಷದ ನಿರ್ಧಾರವಾಗಿದೆ. ನಾನು ಪ್ರಶ್ನೆ ಮಾಡುವುದಿಲ್ಲ ಎಂದು ರಾಜಣ್ಣ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular