ರಾಯಚೂರು: ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಗೋ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮೇವು ಸಂಗ್ರಹಿಸಿಟ್ಟಿದ್ದ ಮೇವಿನ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗೋ ಶಾಲೆ ಸಿಬ್ಬಂದಿಗಳು ತಕ್ಷಣ ಗೋಶಾಲೆಯಲ್ಲಿದ್ದ ನೂರಾರು ಗೋವುಗಳನ್ನು ಹೊರಗೆ ಬಿಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಎಮ್ಮಿಗನೂರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಲಕ್ಷಾಂತರ ರೂಪಾಯಿ ಸಾಮಗ್ರಿಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.