ಬೆಂಗಳೂರು: ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಹಸಿರು ಮಾರ್ಗದ ಕಡೆಗೆ ಹೋಗುವ ಟ್ರ್ಯಾಕ್ ಗೆ ಯುವಕನೊಬ್ಬ ಹಾರಿ ಆತ್ಮಹತ್ಯೆಗೆ ಮುಂದಾದ ಘಟನೆ ನಡೆದಿದೆ. ಇದರಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಿ ಪ್ರಯಾಣಿಕರು ಪರದಾಡಿದ್ದಾರೆ.
ರಾತ್ರಿ 10:15 ರ ಸುಮಾರಿಗೆ ಯುವಕನೊಬ್ಬ ಏಕಾಏಕಿ ಮೆಟ್ರೋ ಹಳಿಗೆ ಹಾರಿದ್ದಾನೆ. ತಕ್ಷಣವೇ ಭದ್ರತಾ ಸಿಬ್ಬಂದಿ ತುರ್ತು ಪರಿಸ್ಥಿತಿಯ ಇಟಿಎಸ್ ಬಟನ್ ಒತ್ತಿ ರೈಲು ನಿಲ್ಲಿಸಿದ್ದಾರೆ. ಗಾಯಗೊಂಡಿದ್ದ ಯುವಕನನ್ನು ಹೊರಗೆ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಎಂಆರ್ಸಿಎಲ್ ಭದ್ರತಾ ಮುಖ್ಯಸ್ಥ ಸೆಲ್ವಂ ಮಾಹಿತಿ ನೀಡಿದ್ದಾರೆ.
ರೈಲಿನ ಕೆಳಗೆ ಬಿದ್ದಿದ್ದ ವ್ಯಕ್ತಿಯನ್ನು ಮೆಟ್ರೋ ಸಿಬ್ಬಂದಿ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ನಾಲ್ಕು ಟ್ರಿಪ್ ಗಳ ಶಾರ್ಟ್ ಲೂಪ್ ರೈಲುಗಳನ್ನು ಓಡಿಸಲಾಗಿದೆ ಎಂದು ಹೇಳಲಾಗಿದೆ.