ಬೆಂಗಳೂರು: ಶಾಲೆಗಳಲ್ಲಿ ಮೊಟ್ಟೆ ವಿತರಣೆಯ ಬಗ್ಗೆ ಕೆಲವು ಕಡೆ ಆಕ್ಷೇಪಣೆ, ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಪ್ರವೇಶಾತಿ ವೇಳೆಯೇ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ನೀಡುತ್ತಿರುವ ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುತ್ತಿಲ್ಲ ಎಂದು ಫೌಂಡೇಶನ್ ವರದಿ ನೀಡಿದ್ದು, ಪ್ರಮುಖವಾಗಿ ಮೊಟ್ಟೆ ತಿನ್ನದೆ ಇರಲು ವಾಡಿಕೆ, ವೈಯಕ್ತಿಕ ಆಚರಣೆ, ಕೆಲವು ಪೋಷಕರು ಒಪ್ಪಿಗೆ ನೀಡದಿರುವುದು ಗೊತ್ತಾಗಿದೆ. ಈ ಕಾರಣಗಳಿಂದ ಮಕ್ಕಳ ಪ್ರವೇಶಾತಿ ವೇಳೆಯೇ ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಮೊಟ್ಟೆ ಸೇವಿಸುವವರಿಗೆ ಮೊಟ್ಟೆ, ತಿನ್ನದವರಿಗೆ ಬಾಳೆಹಣ್ಣು ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.