ವೇತನ ಕಡಿತ ಆತಂಕದಲ್ಲಿದ್ದ ಕಡಿಮೆ ಫಲಿತಾಂಶ ಬಂದ ಶಾಲಾ ಶಿಕ್ಷಕರಿಗೆ ರಿಲೀಫ್: ವೇತನ ಕಡಿತ ಆದೇಶ ವಾಪಸ್

ಬೆಂಗಳೂರು: ಕಡಿಮೆ ಫಲಿತಾಂಶ ಬಂದರೆ ಶಿಕ್ಷಕರ ವೇತನ ಕಡಿತ ಮಾಡುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇದರಿಂದಾಗಿ ಅನುದಾನಿತ ಶಾಲೆಗಳ ಶಿಕ್ಷಕರಿಗೆ ರಿಲೀಫ್ ಸಿಕ್ಕಿದೆ. 2019ರ ಆದೇಶ ವಾಪಸ್ ಗೆ ಪರಿಶೀಲನೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಎಸ್.ವಿ. ಸಂಕನೂರು ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.

ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶೇಕಡ 60 ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದರೆ ವಿಷಯ ಶಿಕ್ಷಕರ ವಾರ್ಷಿಕ ವೇತನ, ಬಡ್ತಿ ತಡೆ ಹಿಡಿಯುವ, ಶಿಕ್ಷಕರ ವೇತನ ಅನುದಾನ ತಡೆ ಹಿಡಿಯುವ ಕ್ರಮ ಜಾರಿ ಮಾಡುವುದಿಲ್ಲ. ಈ ಸಂಬಂಧ 2019 ರಲ್ಲಿ ಹೊರಡಿಸಿದ ಆದೇಶ ವಾಪಸ್ ಪಡೆಯುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಫಲಿತಾಂಶ ಕಡಿಮೆಯಾಗಲು ಕೇವಲ ಶಿಕ್ಷಕರು ಮಾತ್ರ ಕಾರಣರಾಗುತ್ತಾರೆಯೇ? ಪೋಷಕರು, ವಿದ್ಯಾರ್ಥಿಗಳಿಗೆ ಹೊಣೆ ಇಲ್ಲವೇ? ಪ್ರಸ್ತುತ ಒಂದರಿಂದ 9ನೇ ತರಗತಿವರೆಗೆ ಯಾವುದೇ ಮಕ್ಕಳನ್ನು ಅನುತ್ತೀರ್ಣಗೊಳಿಸದಂತೆ ನಿಯಮ ಇದೆ. ಕಡಿಮೆ ಅಂಕ ಇದ್ದವರನ್ನೂ ಪಾಸ್ ಮಾಡಬೇಕಿದೆ. ಹೀಗಿರುವಾಗ ಏಕಾಏಕಿ 10ನೇ ತರಗತಿಯಲ್ಲಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಕಡಿತ ಸೇರಿ ವಿವಿಧ ಕ್ರಮ ಕೈಗೊಳ್ಳುವುದು ಎಷ್ಟರಮಟ್ಟಿಗೆ ಸರಿ ಎಂದು ಎಸ್.ವಿ. ಸಂಕನೂರ ಪ್ರಶ್ನಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read