HomeLatest Newsಗಣೇಶ ವಿಗ್ರಹ ಮಾರಾಟ ಮಳಿಗೆ ಮೇಲೆ ದಿಢೀರ್ ದಾಳಿ: ಪಿಒಪಿ ಗಣೇಶ ಮೂರ್ತಿಗಳು ವಶಕ್ಕೆ

ಗಣೇಶ ವಿಗ್ರಹ ಮಾರಾಟ ಮಳಿಗೆ ಮೇಲೆ ದಿಢೀರ್ ದಾಳಿ: ಪಿಒಪಿ ಗಣೇಶ ಮೂರ್ತಿಗಳು ವಶಕ್ಕೆ

ಧಾರವಾಡ: ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪಿಒಪಿ ಗಣೇಶ ವಿಗ್ರಹಗಳ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಧಾರವಾಡ ನಗರದ ಗಾಂಧಿ ಚೌಕ ಪ್ರದೇಶದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಜಗದೀಶ ಐ.ಹೆಚ್. ಅವರ ನೇತೃತ್ವದಲ್ಲಿ ಪಾಲಿಕೆ ಮತ್ತು ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ 10 ಕ್ಕೂ ಹೆಚ್ಚು ಅಂಗಡಿಗಳನ್ನು ತಪಾಸಣೆ ಮಾಡಿದ್ದಾರೆ.

ಅಧಿಕಾರಿಗಳ ಅನಿರೀಕ್ಷಿತ ದಾಳಿಯಿಂದಾಗಿ ಗಾಂಧಿ ಚೌಕದಲ್ಲಿರುವ ಸಂತೋಷ್ ಚವ್ಹಾಣ ಅವರ ಗಣೇಶ ವಿಗ್ರಹ ಮಾರಾಟ ಅಂಗಡಿಯಲ್ಲಿ 10 ಕ್ಕೂ ಹೆಚ್ಚು ಪಿಒಪಿ ಗಣೇಶ ವಿಗ್ರಹಗಳು ಪತ್ತೆಯಾಗಿವೆ. ಇವುಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಮಹಾನಗರಪಾಲಿಕೆಯ ಸಿಬ್ಬಂದಿಗಳ ವಶಕ್ಕೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಈ ಸಂದರ್ಭದಲ್ಲಿ ತಪಾಸಣೆ ಮಾಡಿದ ವಿವಿಧ ಮಾರಾಟ ಅಂಗಡಿಗಳಿಂದ ಗಣೇಶ ವಿಗ್ರಹಗಳ ಮಾದರಿ(ಶ್ಯಾಂಪಲ್)ಗಳನ್ನು ಪಡೆದು, ಪರಿಶೀಲನೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಯಿತು.

 ದಿಢೀರ್ ದಾಳಿ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಪರಿಸರ ಅಭಿಯಂತರರಾದ ಸರೋಜಾ ಪೂಜಾರ, ಹಿರಿಯ ಆರೋಗ್ಯ ನಿರೀಕ್ಷಕ ಶಾಂತಗೌಡ ಬಿರಾದಾರ, ಆರೋಗ್ಯ ನಿರೀಕ್ಷಕ ವಿದ್ಯಾಶ್ರೀ ಬಡಿಗೇರ, ಮುನಾಫ್ ಸೌದಾಗರ್, ಶಶಿಧರ್ ಕೋಡಿಹಳ್ಳಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular