HomeLatest NewsRAIN ALERT: ವಾಯುಭಾರ ಕುಸಿತ: ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಕೆಲ ಜಿಲ್ಲೆಗಳಲ್ಲಿ...

RAIN ALERT: ವಾಯುಭಾರ ಕುಸಿತ: ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಆಗಸ್ಟ್ 16ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಆಗಸ್ಟ್ 13ರಿಂದ ವಾಯುಭಾರ ಕುಸಿತವಾಗಲಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 16ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

ಆಗಸ್ಟ್ 13ರಿಂದ 16ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಲುರು, ಶಿವಮೊಗ್ಗ, ಕೊಡಗು, ಹಾಸನ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 12ರಿಂದ 18ರವರೆಗೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular