ಮಂಡ್ಯ: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ಯುವಕ ಬಲಿಯಾಗಿದ್ದಾರೆ. ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘತದಿಂದ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಕರೋಟಿ ಗ್ರಾಮದಲ್ಲಿ ನಡೆದಿದೆ.
21 ವರ್ಷದ ನವೀನ್ ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಬೆಂಗಳೂರಿನ ಕಾಲೇಜ್ ವೊಂದರಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ನವೀನ್ ರಜೆ ಇದ್ದ ಕಾರಣ ಊರಿಗೆ ಬಂದಿದ್ದ. ಮನೆಯಲ್ಲಿ ಇದ್ದಾಗಲೇ ಹಠಾತ್ ಹೃದಯಘಾತವಾಗಿ ನವೀನ್ ಕುಸಿದು ಬಿದ್ದಿದ್ದಾನೆ. ಕೂಡಲೇ ಪೋಷಕರು ಕಿಕ್ಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದ್ದು, ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ನವೀನ್ ಕೊನೆಯುಸಿರೆಳೆದಿದ್ದಾರೆ.
ಕಿಕ್ಕೇರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರೆ ನವೀನ್ ಬದುಕುತ್ತಿದ್ದ. ಪ್ರಾಥಮಿಕ ಚಿಕಿತ್ಸೆ ನೀಡದಿರುವುದೇ ಪುತ್ರನ ಸಾವಿಗೆ ಕಾರಣವೆಂದು ಪೋಷಕರು ಆರೋಪಿಸಿದ್ದಾರೆ.