ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ದಂಧೆ ನಡೆಸುತ್ತಿದ್ದ ಆರು ಮಂದಿ ಪೆಡ್ಲರ್ ಗಳನ್ನು ಪ್ರತ್ಯೇಕವಾಗಿ ಅರೆಸ್ಟ್ ಮಾಡಿದ್ದಾರೆ.
ಉತ್ತರ ವಿಭಾಗದ ಜೆ.ಸಿ.ನಗರ, ಹೆಬ್ಬಾಳ, ಆರ್.ಟಿ.ನಗರ ಮತ್ತು ಜಾಲಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಅಪರಿಚಿತ ವ್ಯಕ್ತಿಗಳು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದಿದ್ದು, ದಾಳಿ ನಡೆಸಿದ ಪೊಲೀಸರು ಮಾಲು ಸಮೇತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 3 ಕೆ.ಜಿ 330 ಗ್ರಾಂ ಗಾಂಜಾ, 278 ಗ್ರಾಂ ಎಂ.ಡಿ.ಎಂ.ಎ, ದ್ವಿ-ಚಕ್ರ ವಾಹನ, 3 ಮೊಬೈಲ್ ಫೋನ್ ಸೇರಿ ನಗದು ವಶಪಡಿಸಿಕೊಳ್ಳಲಾಗಿದೆ.ಹೆಬ್ಬಾಳ ಪೊಲೀಸ್ ಠಾಣಾ ಸರಹದ್ದಿನ, ರೈಲ್ವೆ ಟ್ರ್ಯಾಕ್ ಸಮೀಪದ ಖಾಲಿ ಜಾಗದಲ್ಲಿ ಹಾಗೂ ಜೆ.ಸಿ.ನಗರ ಪೊಲೀಸ್ ಠಾಣಾ ಸರಹದ್ದಿನ, ಎಂ.ಆರ್.ಎಸ್ ಪಾಳ್ಯದ ಇಂದಿರಾ ಕ್ಯಾಂಟಿನ್ ಬಳಿ ಜಾಲಹಳ್ಳಿ ಪೊಲೀಸ್ ಠಾಣಾ ಸರಹದ್ದಿನ, ಎಚ್.ಎಂ.ಟಿ ಕ್ಯಾಟ್ರಸ್ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ.