ಬೆಂಗಳೂರು : ಬೆಂಗಳೂರಿನ ಬಾಣಸವಾಡಿಯ ಅಗ್ನಿಶಾಮಕ ಕಚೇರಿ ಬಳಿ ನಿಲ್ಲಿಸಿದ್ದ ಶಾಲಾ ಬಸ್ ಒಂದು ಬೆಂಕಿಗೆ ಆಹುತಿಯಾಗಿದ್ದು, ಅದರೊಳಗೆ ವ್ಯಕ್ತಿಯ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬೆಂಗಳೂರಿನ ಬಾಣಸವಾಡಿಯಲ್ಲಿ ಈ ಘಟನೆ ನಡೆದಿದೆ. ಅಲ್ಲಿ ಕೆಟ್ಟು ಹೋಗಿದ್ದ ಶಾಲಾ ಬಸ್ ಒಂದನ್ನು ನಿಲ್ಲಿಸಲಾಗಿತ್ತು. ನಿನ್ನೆ ತಡರಾತ್ರಿ ಬಸ್ ಬೆಂಕಿಗೆ ಆಹುತಿಯಾಗಿದೆ. ಬಸ್ ನೊಳಗೆ ದುಷ್ಕರ್ಮಿಗಳು ಎಣ್ಣೆ ಪಾರ್ಟಿ ಮಾಡಿ ವ್ಯಕ್ತಿಯನ್ನು ಹತ್ಯೆ ಮಾಡಿ ಬಸ್ ಗೆ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ ಎಂದು ಶಂಕಿಸಲಾಗಿದೆ
. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿ ಬೆಂಕಿ ನಂದಿಸಿದ್ದಾರೆ.