HomeLatest Newsಖಾಸಗಿ ಬಡಾವಣೆಗಳಿಗೆ ಸರ್ಕಾರದಿಂದ ನೀರು, ವಿದ್ಯುತ್, ಒಳಚರಂಡಿ ವ್ಯವಸ್ಥೆ ಇಲ್ಲ: ಸಚಿವ ಬೈರತಿ ಸುರೇಶ್

ಖಾಸಗಿ ಬಡಾವಣೆಗಳಿಗೆ ಸರ್ಕಾರದಿಂದ ನೀರು, ವಿದ್ಯುತ್, ಒಳಚರಂಡಿ ವ್ಯವಸ್ಥೆ ಇಲ್ಲ: ಸಚಿವ ಬೈರತಿ ಸುರೇಶ್

ಬೆಂಗಳೂರು: ಖಾಸಗಿ ಬಡಾವಣೆಗಳಿಗೆ ಸರ್ಕಾರದಿಂದ ನೀರು, ವಿದ್ಯುತ್, ಒಳ ಚರಂಡಿ ವ್ಯವಸ್ಥೆ ಕಲ್ಪಿಸುವುದಿಲ್ಲ. ಆದರೆ ಈ ಬಡಾವಣೆಗಳು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಒಳಪಟ್ಟರೆ ಮಾತ್ರ ಅಗತ್ಯ ಹಣ ಪಡೆದುಕೊಂಡು ನಿರ್ವಹಣೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಬಿಜೆಪಿಯ ವೈ.ಎಂ. ಸತೀಶ್ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಮೂಲಸೌಕರ್ಯ ಕಲ್ಪಿಸುವುದು ಖಾಸಗಿ ಬಡಾವಣೆ ನಿರ್ಮಾಣ ಮಾಡುವವರ ಜವಾಬ್ದಾರಿಯಾಗಿರುತ್ತದೆ. ಸರ್ಕಾರಕ್ಕೆ ಅಗತ್ಯ ಹಣ ನೀಡಿದರೆ ನೀರು, ವಿದ್ಯುತ್ ಪೂರೈಸಲಾಗುವುದು. ಅದೇ ರೀತಿ ಖಾಸಗಿ ಬಡಾವಣೆಗಳು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಒಳಪಟ್ಟರೆ ಮೂಲ ಸೌಲಭ್ಯಗಳ ನಿರ್ವಹಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೇವಲ ತೆರಿಗೆ ಕಾರಣಕ್ಕೆ ಬಿ ಖಾತಾ ನೀಡಲಾಗುತ್ತಿದೆ. ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ. ಆದರೆ ಈಗ ಸರ್ಕಾರ ಒಂದು ಬಾರಿಗೆ ಅನ್ವಯವಾಗುವಂತೆ ಬಿ ಖಾತಾಗಳಿಗೂ ಎ ಖಾತಾ ನೀಡಲು ಮುಂದಾಗಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular