BREAKING : ‘ಧರ್ಮಸ್ಥಳ ಕೇಸ್’ ಗೆ ಮತ್ತೊಂದು ಬಿಗ್ ಟ್ವಿಸ್ಟ್ : 30 ಕಡೆ 300 ಹೆಣ ಹೂತಿದ್ದೇನೆ ಎಂದ ದೂರುದಾರ.!

ಧರ್ಮಸ್ಥಳ : ಧರ್ಮಸ್ಥಳ ಕೇಸ್ ಗೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸುಮಾರು 30 ಕಡೆ 300 ಹೆಣ ಹೂತಿದ್ದೇನೆ ಎಂದು ಅನಾಮಿಕ ದೂರುದಾರ ಹೇಳಿದ್ದಾನೆ.

ಹೌದು, ಧರ್ಮಸ್ಥಳದಲ್ಲಿ ಸುಮಾರು 30 ಕಡೆ 300 ಹೆಣ ಹೂತಿದ್ದೇನೆ. ಅಲ್ಲೂ ಶೋಧ ನಡೆಸಿ ಎಂದು ಅನಾಮಿಕ ದೂರುದಾರ ಎಸ್ ಐ ಟಿ ಗೆ ಹೇಳಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಆರೋಪ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಎಸ್ಐಟಿ 12 ಕಡೆ ಶೋಧ ಕಾರ್ಯ ನಡೆಸಿದೆ. 13ನೇ ಸ್ಥಳದಲ್ಲಿಯೂ ಮೃತದೇಹದ ಅವಶೇಷ ಪತ್ತೆಯಾಗದಿದ್ದರೆ ಎಸ್ಐಟಿ ಶೋಧಕಾರ್ಯ ನಿಲ್ಲಿಸಬೇಕಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಸಂಜೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ ಶವಗಳ ಶೋಧ ಅಥವಾ ಧರ್ಮಸ್ಥಳ ಕ್ಷೇತ್ರದ ಕುರಿತಾಗಿ ಯಾರೊಬ್ಬರೂ ಪ್ರತಿಕ್ರಿಯೆ ನೀಡಬಾರದು. ಪಕ್ಷದ ಶಾಸಕರು ಸೇರಿ ಯಾವರೊಬ್ಬರು ಕೂಡ ಭಾವನಾತ್ಮಕವಾಗಿ ಹೇಳಿಕೆ ನೀಡಬಾರದು ಎಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

ರಾಜ್ಯಾದ್ಯಂತ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾದ ಹಿನ್ನೆಲೆಯಲ್ಲಿ ಎಸ್ಐಟಿ ರಚಿಸಲಾಗಿದೆ. ಈ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಇದುವರೆಗೆ ಶೋಧ ಕಾರ್ಯ ನಡೆಸಿದ 12 ಸ್ಥಳಗಳಲ್ಲಿ ಒಂದು ಕಡೆ ಮಾತ್ರ ಮೂಳೆಗಳು ಸಿಕ್ಕಿವೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read