ನವದೆಹಲಿ: ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು, ಇಂದು ದೆಹಲಿಯಲ್ಲಿ ಇಡಿ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಅಕ್ರಮ ಬೆಟ್ಟಿಂಗ್ ಆ್ಯಪ್ಗಳು ಮತ್ತು ಪ್ಲಾಟ್ಫಾರ್ಮ್ಗಳ ಮೇಲಿನ ವ್ಯಾಪಕ ಕ್ರಮದ ಭಾಗವಾಗಿ ಈ ಸಮನ್ಸ್ ಬಂದಿದೆ,
ಮೇ ತಿಂಗಳಲ್ಲಿ, ತೆಲಂಗಾಣ ಪೊಲೀಸರು ರಾಣಾ ದಗ್ಗುಬಾಟಿ ಮತ್ತು ಪ್ರಕಾಶ್ ರಾಜ್ ಸೇರಿದಂತೆ 25 ಜನಪ್ರಿಯ ನಟರ ವಿರುದ್ಧ ಇಡಿ ಅಧಿಕಾರಿಗಳು ಪ್ರಕರಣಗಳನ್ನು ದಾಖಲಿಸಿದ್ದಾರೆ.
ಸೋಮವಾರ, ನಟ ರಾಣಾ ದಗ್ಗುಬಾಟಿ ಆನ್ಲೈನ್ ಬೆಟ್ಟಿಂಗ್ ವೇದಿಕೆಗಳ ಅಕ್ರಮ ಪ್ರಚಾರದ ಆರೋಪದ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಹೈದರಾಬಾದ್ನಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದರು. ನಟಿಯರಾದ ಮಂಚು ಲಕ್ಷ್ಮಿ, ನಿಧಿ ಅಗರ್ವಾಲ್, ಅನನ್ಯ ನಾಗಲ್ಲ ಮತ್ತು ದೂರದರ್ಶನ ನಿರೂಪಕಿ ಶ್ರೀಮುಖಿ ಸೇರಿದಂತೆ ಎಫ್ಐಆರ್ನಲ್ಲಿ ಹೆಸರಿಸಲಾದ ಹಲವಾರು ಇತರ ಸೆಲೆಬ್ರಿಟಿಗಳ ಹಣಕಾಸಿನ ವಹಿವಾಟುಗಳ ಬಗ್ಗೆ ಸಹ ಇಡಿ ತನಿಖೆ ನಡೆಸುತ್ತಿದೆ.
#WATCH | Former Indian Cricketer Suresh Raina reaches ED office in Delhi to record his statement in 1xBet case following summons by the agency. pic.twitter.com/wJAw1gACt5
— ANI (@ANI) August 13, 2025