ಬೆಂಗಳೂರು : ಬೆಂಗಳೂರಿನಲ್ಲಿ ದುಷ್ಕರ್ಮಿಯೋರ್ವ ಮಹಿಳಾ ಅಧಿಕಾರಿಗೆ ಕುತ್ತಿಗೆಗೆ ಚಾಕು ಇಟ್ಟು ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾದ ಘಟನೆ ನಡೆದಿದೆ.
ಬೆಂಗಳೂರಿನ ಜುಡಿಷಿಯಲ್ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಸ್ಕಾಂ ನಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಬೆಂಗಳೂರಿನಲ್ಲಿ ಪಿಜಿಯೊಂದಲ್ಲಿ ವಾಸವಾಗಿದ್ದರು.ಚಾಕು ಸಮೇತ ಪಿಜಿ ಗೆ ಬಂದಿದ್ದ ಕಾಮುಕ ಮಹಿಳೆಯ ರೂಮಿಗೆ ನುಗ್ಗಿ ಮಹಿಳೆಯ ಕುತ್ತಿಗೆ ಚಾಕು ಇಟ್ಟು ಹೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಹಾಗೂ ಅವರ ಮೊಬೈಲ್ ಕಿತ್ತುಕೊಂಡು ದುಷ್ಕರ್ಮಿ ಪರಾರಿಯಾಗಿದ್ದಾನೆ.
You Might Also Like
TAGGED:ಲೈಂಗಿಕ ದೌರ್ಜನ್ಯ