ಬೆಂಗಳೂರು: ಶಾಲಾ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕಾ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಮಹಿಳಾ ಮತ್ತು ಮಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಅಕ್ಕಾ ಪಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಗಸ್ಟ್ 15 ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕಾ ಪಡೆ ಆರಂಭಿಸಲಾಗುತ್ತಿದೆ ಎಂದು ವಿವರಿಸಿದರು.
ಮಕ್ಕಳ ಸುರಕ್ಷತೆಗಾಗಿ ಮಕ್ಕಳ ಸಹಾಯವಾಣಿ 1098 ಸಂಖ್ಯೆಯೂ ದಿನ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಬಂದರೂ ತಕ್ಷಣ ಮಗುವನ್ನು ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುತ್ತಾರೆ ಎಂದು ಮಾಹಿತಿ ನೀಡಿದರು.
ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕಾವಲು ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.