ಹೈದರಾಬಾದ್: ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ನಟಿ ಮಂಚು ಲಕ್ಷ್ಮಿ ಜಾರಿ ನಿರ್ದೇಶನಾಲಯ (ED) ವಿಚಾರಣೆಗೆ ಹಾಜರಾಗಿದ್ದಾರೆ.
ಆನ್ ಲೈನ್ ಬೆಟ್ಟಿಂಗ್ ಹಾಗೂ ಜೂಜಾಟಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಕೇಸ್ ನಲ್ಲಿ ನಟಿ ಮಂಚು ಲಕ್ಷ್ಮಿ ಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಂಚು ಲಕ್ಷ್ಮಿ ಹೈದರಾಬಾದ್ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಇದೇ ಪ್ರಕರಣದಲ್ಲಿ ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಇಡಿ ವಿಚಾರಣೆಗೆ ಹಾಜರಾಗಿದ್ದರು.
ಬೆಟ್ಟಿಂಗ್ ಆ್ಯಪ್ ಗಳ ಪ್ರಚಾರಕ್ಕೆ ಸಂಬಂಧಿಸಿದಂತೆ ನಟ-ನಟಿಯರು ಹಾಗೂ ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳ ವಿರುದ್ಧ ೫ ರಾಜ್ಯಗಳಲ್ಲಿ ದಾಖಲಾಗಿರುವ ಎಫ್ ಐ ಆರ್ ಗಳ ಆಧಾರದ ಮೇಲೆ ಇಡಿ ವಿಚಾರಣೆ ನಡೆಸುತ್ತಿದೆ.