ಶಿವಮೊಗ್ಗ : ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಜಿಲ್ಲೆಯ “ಬಿ” ಮತ್ತು ‘ಸಿ’ ಪ್ರವರ್ಗ ಮುಜರಾಯಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ರಚಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.12 ರಂದು ಕೊನೆಯ ದಿನವಾಗಿದ್ದು, ಎಲ್ಲಾ ತಾಲ್ಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ನೇರವಾಗಿ ತಾಲ್ಲೂಕು ಕಚೇರಿಗೆ ಸಲ್ಲಿಸಬಹುದು.
ಅರ್ಜಿದಾರನಿಗೆ ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗಧಿತ
ನಮೂನೆ-1 (ಬಿ) (22 ನೇ ನಿಯಮ) ರಲ್ಲಿ ಭರ್ತಿ ಮಾಡಬೇಕು.
ನಿಗದಿಪಡಿಸಿದ ದಿನಾಂಕದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:ಮುಜರಾಯಿ ದೇವಾಲಯ