ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಎಸ್ ಐಟಿ ಅಧಿಕಾರಿಗಳು ತನಿಖೆಯನ್ನು ವಿನಾಕಾರಣ ವಿಳಂಬಗೊಳಿಸುವಂತಿಲ್ಲ. ಆದಷ್ಟು ಶೀಘ್ರದಲ್ಲಿ ತನಿಖೆ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಬಿಜೆಪಿಯ ಹಿರಿಯ ಶಾಸಕರು, ವಿಧಾನಪರಿಷತ್ ಸದಸ್ಯರನ್ನೊಳಗೊಂಡ ಒಂದು ತಂಡ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆಯಲಿದೆ. ನಾವು ಪಕ್ಷದ ಪ್ರತಿನಿಧಿಗಳಾಗಿ ಅಲ್ಲಿಗೆ ಹೋಗುತ್ತಿಲ್ಲ. ಬದಲಾಗಿ ಜನಸಾಮಾನ್ಯರಂತೆ ಹೋಗುತ್ತಿದ್ದೇವೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದರು.