ತುಮಕೂರು : ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ವಜಾಗೊಳಿಸಿರುವುದನ್ನು ಖಂಡಿಸಿ ಅವರ ಬೆಂಬಲಿಗರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಕೆಲವು ಮಹಿಳೆಯರು ಹೈಡ್ರಾಮಾ ನಡೆಸಿದ್ದಾರೆ. ಓರ್ವ ಮಹಿಳೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರೆ, ಮತ್ತೋರ್ವ ಮಹಿಳೆ ಕುತ್ತಿಗೆಗೆ ಸೀರೆ ಬಿಗಿದುಕೊಂಡು ಆತ್ನಹತ್ಯೆಗೆ ಯತ್ನಿಸಿದ್ದಾರೆ. ಯಶೋಧಮ್ಮ, ಪಾರ್ವತಮ್ಮ ಎಂಬ ಮಹಿಳೆ ಹೈಡ್ರಾಮಾ ಮಾಡಿದ್ದಾರೆ.
ರಾಜಣ್ಣ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಬೆಂಬಲಿಗರು ನಂತರ ಪ್ರತಿಭಟನೆ ಕೈ ಬಿಟ್ಟಿದ್ದಾರೆ.