ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಎಸ್ ಐಟಿ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಎಸ್ ಐಟಿ ಮುಖ್ಯ ಸ್ಥ ಪ್ರಣವ್ ಮೊಹಂತಿ, ಡಿಐಜಿಪಿ ಅನುಚೇತ್ ಭೇತಿ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಈ ವಾರದಲ್ಲಿಯೇ ಎಸ್ ಐಟಿ ಅಧಿಕಾರಿಗಳ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಎಸ್ ಐಟಿ ಮುಖ್ಯಸ್ಥರು ಗೃಹ ಸಚಿವ ಪರಮೇಶ್ವರ್ ಭೇಟಿ ವೇಳೆ ತನಿಖಾ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಶೀಘ್ರವಾಗಿ ತನಿಖೆ ಮುಗಿಸಿ ವರದಿ ನೀಡುವಂತೆ ಸೂಚಿಸಿದರು. ಮುಂದಿನ ತನಿಖೆ ಬಗ್ಗೆ ಎಸ್ ಐಟಿ ಅಧಿಕಾರಿಗಳ ಸಭೆ ಬಳಿಕ ನಿರ್ಧಾರ ಕೈಗೊಳ್ಲುವ ಬಗ್ಗೆಯೂ ಚರ್ಚೆ ನಡೆಸಲಾಯಿತು ಎಂದು ತಿಳಿದುಬಂದಿದೆ.