ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ಮತ್ತೊಂದು ಬಲಿ ಪಡೆದಿದೆ. ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ರೂಪೇನ ಅಗ್ರಹಾರ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.