ಗದಗ: ಯುವಕನೊಬ್ಬನನ್ನು ದುಷ್ಕರ್ಮಿಗಳ ಗುಂಪು ಬರ್ಬರವಾಗಿ ಕೊಲೆಗೈದಿರುವ ಘಟನೆ ಗದಗದಲ್ಲಿ ನಡೆದಿದೆ.
ಗದಗದ ತಾಜ್ ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ಯುವಕನ ಮೇಲೆ ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಏಕಾಏಕಿ ಡ್ರ್ಯಾಗರ್ ನಿಂದ ಇರಿದಿದ್ದಾರೆ. ಗಂಭೀರವಾಗಿ ಹಲ್ಲೆಗೊಳಗಾದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯನ್ನು ಕಣ್ಣಾರೆ ಕಂಡ ಹೋಟೆಲ್ ಸಿಬ್ಬಂದಿ, ಜನರು ಬೆಚ್ಚಿ ಬಿದ್ದಿದ್ದಾರೆ.
ಬಸವರಾಜ್ ಮಮ್ಮಟ (21) ಕೊಲೆಯಾದ ಯುವಕ. ಘಟನಾ ಸ್ಥಳಕ್ಕೆ ಡಿವೈ ಎಸ್ ಪಿ ಪ್ರಭುಗೌಡ ಪಾಟೀಲ್ ಭೇಟಿ ನೀಡಿದ್ದಾರೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.