ಬೆಂಗಳೂರು : ನಾಳೆಯಿಂದ ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಗೊಳಿಸಲಾಗುತ್ತದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ವಿಧಾನಸಭೆಯಲ್ಲಿ ಹೇಳಿದ್ದಾರೆ.
ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಇದೇ ಆ. 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದ್ದು, ನಿಯಮ ಉಲ್ಲಂಘಿಸಿರುವರ ವಿರುದ್ಧ ದಂಡ ವಿಧಿಸುವಂತೆ ಸಂಬಂಧಪಟ್ಟ ದೇವಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೇವಾಲಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳು ಬಳಸುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಿಳಿಸಲಾಗಿದೆ ಎಂದರು.
ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ
— DIPR Karnataka (@KarnatakaVarthe) August 13, 2025
– @RLR_BTM , ಮುಜರಾಯಿ ಸಚಿವರು pic.twitter.com/Tn8goYV9qt
ʼಸಿʼ ದರ್ಜೆ ದೇವಾಲಯಗಳ ದತ್ತು ಸ್ವೀಕಾರಕ್ಕೆ ಅವಕಾಶ
— DIPR Karnataka (@KarnatakaVarthe) August 13, 2025
– @RLR_BTM , ಮುಜರಾಯಿ ಸಚಿವರು pic.twitter.com/smCvPrzrCD