HomeLatest NewsGOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ '1 ಲಕ್ಷ'...

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅರಿವು ಯೋಜನೆಯಡಿ ‘1 ಲಕ್ಷ’ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ವಿಳಾಸ: kacdc.karnataka.gov.ing ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು 31/10/2025 ಕೊನೆಯ ದಿನಾಂಕವಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು: ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000 ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000 ಗಳ ಮಿತಿಯೊಳಗಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಳಿಗೆ ಶೇ.5, ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಸಂಪರ್ಕ ವಿವರ: ನಿಗಮದ ಸಹಾಯವಾಣಿ: 08172-295253 (ಬೆಳಿಗ್ಗೆ:10 ರಿಂದ ಸಂಜೆ:5.30 ವರೆಗೆ ಸಂಪರ್ಕಿಸಬಹುದಾಗಿದೆ). ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ(ನಿ), ಹಾಸನ ಜಿಲ್ಲೆ, ದೂರವಾಣಿ ಸಂಖ್ಯೆ: 08172-295253 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular