ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ ಎಂದು ನಮಗೂ ಅನ್ನಿಸುತ್ತಿದೆ. ಈ ನಿಟ್ಟಿನಲ್ಲಿ ಸತ್ಯಾಸತ್ಯತೆ ಹೊರಬರಬೇಕೆಂದು ತನಿಖೆ ನಡೆಸಲಾಗುತ್ತಿದೆ ಎಂದರು.
ದೂರುದಾರ ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದಾನೆ. ಈ ನಿಟ್ಟಿನಲ್ಲಿ ಡೀಪ್ ಆಗಿ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಿಎಂ ಸಿದ್ದರಾಮಯ್ಯ ಕೂಡ ನಿರ್ಧಾಕ್ಷಿಣ್ಯ ಕ್ರಮ ಆಗಬೇಕು ಎಂದು ಹೇಳಿದ್ದಾರೆ ಎಂದರು.
ನನಗೂ ಗೊತ್ತಿದೆ ಅದು ಖಾಲಿ ಕೇಸ್, ಏನೂ ಇಲ್ಲ ಎಂದು. ಸೋಮವಾರ ಎಲ್ಲಾ ಮಾಹಿತಿ ಪಡೆದು ಗೃಹ ಸಚಿವ ಪರಮೇಶ್ವರ್ ಅವರು ಮಾತನಾಡುತ್ತಾರೆ. ಹಿಂಧೂ ಧರ್ಮ ಮಾತ್ರವಲ್ಲ ಯಾವ ಧರ್ಮದ ಭಾವನೆಗಳಿಗೂ ಧಕ್ಕೆ ಆಗಬಾರದು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ಈ ಪ್ರಕರಣ ಕೋರ್ಟ್ ನಲ್ಲಿ ಇರುವುದರಿಂದ ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.