ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೊಲೆ ಆರೋಪಿಗಾನ್ನು ಮತ್ತೆ ಪೊಲೀಸರು ಬಂಧಿಸಿದ್ದಾರೆ.
ನಟ ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಲಕ್ಷ್ಮಣ್, ನಾಗರಾಜ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ನಾಳೆ ಬಂಧಿಸಲಿದ್ದಾರೆ ಎನ್ನಲಾಗಿದೆ. ಈ ನಡುವೆ ಬಂಧಿತ ಆರೋಪಿಗಳನ್ನು ಪೊಲೀಸರು ಜಡ್ಜ್ ಮುಂದೆ ಹಾಜರು ಪಡಿಸಿದ್ದಾರೆ.
ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮುಗಿದ ಬಳಿಕ ಆರೋಪಿಗಳನ್ನು ಬೆಂಗಳೂರಿನ ೬೪ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಈರಣ್ಣ ಪವಡಿ ನಾಯ್ಕ್ ಅವರ ಕೋರಮಂಗಲದಲ್ಲಿರುವ ನಿವಾಸಕ್ಕೆ ಹಾಜರು ಪಡಿಸಲಾಗಿದೆ. ಬಳಿಕ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.