HomeLatest NewsBREAKING NEWS: ದರ್ಶನ್, ಪವಿತ್ರಾ ಗೌಡ ಸೇರಿ ರೇಣುಕಾಸ್ವಾಮಿ ಬರ್ಬರ ಹತ್ಯೆ ಕೇಸ್ 5 ಆರೋಪಿಗಳು...

BREAKING NEWS: ದರ್ಶನ್, ಪವಿತ್ರಾ ಗೌಡ ಸೇರಿ ರೇಣುಕಾಸ್ವಾಮಿ ಬರ್ಬರ ಹತ್ಯೆ ಕೇಸ್ 5 ಆರೋಪಿಗಳು ಜೈಲಿಗೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಐವರು ಆರೋಪಿಗಳು ಮತ್ತೆ ಜೈಲು ಸೇರಿದ್ದಾರೆ.

ಐವರು ಆರೋಪಿಗಳಿಗೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ11 ನಾಗರಾಜು, ಎ12 ಲಕ್ಷ್ಮಣ, ಎ14 ಪ್ರದೋಶ್ ಜೈಲಿಗೆ ಕಳಿಸಲಾಗಿದೆ.

ನ್ಯಾಯಾಧೀಶರ ಆದೇಶದಂತೆ ಪೊಲೀಸರು ಜೈಲಿಗೆ ಕರೆದೊಯ್ದಿದ್ದಾರೆ. ಸಿಸಿಹೆಚ್ 64ರ ನ್ಯಾಯಾಧೀಶರಾದ ಈರಪ್ಪಣ್ಣ ಪವಡಿ ನಾಯ್ಕ್ ಅವರ ಆದೇಶದಂತೆ ಐವರು ಆರೋಪಿಗಳನ್ನು ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರ್ಶನ್ ಮತ್ತು ಇತರೆ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ತಕ್ಷಣವೇ ಆರೋಪಿಗಳನ್ನು ವಶಕ್ಕೆ ಪಡೆಯಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular