ನವದೆಹಲಿ: ದೇಶಾದ್ಯಂತ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಅಂತೆಯೇ ರಾಷ್ಟ್ರ ರಾಜಧಾನಿ ದೆಹಲಿಗೆಯಲ್ಲಿ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ.
ಬೆಳಗ್ಗೆ 7 ಗಂಟೆಗೆ ಪ್ರಧಾನಿ ಮೋದಿ ರಾಜಘಾಟ್ ಗೆ ಭೇಟಿ ನೀಡಲಿದ್ದಾರೆ. ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಬೆಳಗ್ಗೆ 7.20 ರಿಂದ 7:30ರ ಒಳಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ದೆಹಲಿಯ ಕೆಂಪು ಕೋಟೆಯ ಮೇಲೆ ಮೋದಿ ಧ್ವಜಾರೋಹಣ ನೀಡುವವರಿಸಲಿದ್ದು, 12ನೇ ಬಾರಿಗೆ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೆಹಲಿಯ ಕೆಂಪು ಕೋಟೆ ಆವರಣದಲ್ಲಿ ಫ್ಲವರ್ ಶೋ ಏರ್ಪಡಿಸಲಾಗಿದೆ.
ದೇಶದ ವಾಯುಪಡೆ, ನೌಕಾಪಡೆ, ಭೂಸೇನೆ, ಎನ್.ಸಿ.ಸಿ., ಸಿ.ಆರ್.ಪಿ.ಎಫ್., ಐಟಿಬಿಪಿ, ಸಿಐಎಸ್ಎಫ್ ಸೇರಿ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಬ್ಯಾಂಡ್ ಪ್ರದರ್ಶನ ನಡೆಯಲಿದೆ.
ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಜೆ.ಪಿ. ನಡ್ಡಾ, ವಿಪಕ್ಷ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಗಣ್ಯರು, ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಎಸ್ಪಿಜಿ ಭದ್ರತಾ ಪಡೆ, ದೆಹಲಿ ಪೊಲೀಸರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 10 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಇಂದು ಯಾವುದೇ ಡ್ರೋನ್ ಹಾರಾಟಕ್ಕೆ ಅವಕಾಶ ಇರುವುದಿಲ್ಲ. ಅಹಿತಕರ ಘಟನೆ ನಡೆದಂತೆ ಪೊಲೀಸರು ಕಣ್ಗಾವಲು ಹಾಕಿದ್ದಾರೆ.