ಉಡುಪಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದಾರೆ.
ಗಣೇಶ ಚತುರ್ಥಿಗೆ ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ಗಣೇಶ ಚತುರ್ಥಿ ಒಳಗೆ ಜುಲೈ ತಿಂಗಳ ಹಣವನ್ನು ಕೂಡ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.