HomeLatest NewsBREAKING : ಕಲಬುರಗಿಯ ಮಹಾದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ : CM ಸಿದ್ದರಾಮಯ್ಯ ಸಂತಾಪ.!

BREAKING : ಕಲಬುರಗಿಯ ಮಹಾದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ : CM ಸಿದ್ದರಾಮಯ್ಯ ಸಂತಾಪ.!


ಕಲಬುರಗಿ : ಕಲಬುರಗಿಯ ಮಹಾದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಶರಣರ ನಾಡು ಕಲಬುರಗಿಯ ಮಹಾದಾಸೋಹಿ, ಶರಣ ಬಸವೇಶ್ವರ ಮಹಾಸಂಸ್ಥಾನದ ಮಠಾಧೀಶರಾದ ಡಾ. ಶರಣಬಸಪ್ಪ ಅಪ್ಪನವರು ಲಿಂಗೈಕ್ಯರಾದ ಸುದ್ದಿ ನೋವುಂಟು ಮಾಡಿದೆ. ಬಸವಾದಿ ಶರಣರು ತೋರಿದ ಕಾಯಕ ಮತ್ತು ದಾಸೋಹದ ಹಾದಿಯಲ್ಲಿ ನಡೆಯುತ್ತಾ, ಸಮಾಜದ ಏಳಿಗೆಗಾಗಿ ಸದಾ ತುಡಿಯುತ್ತಿದ್ದ ನಿಜ ಬಸವಾನುಯಾಯಿ ಶರಣಬಸಪ್ಪ ಅಪ್ಪನವರ ಅಗಲಿಕೆಯಿಂದ ನಾಡು ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಗುರುಗಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಭಕ್ತವೃಂದಕ್ಕೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular