HomeLatest NewsRAIN ALERT: ಮತ್ತಷ್ಟು ಚುರುಕುಗೊಂಡ ಮುಂಗಾರು: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ

RAIN ALERT: ಮತ್ತಷ್ಟು ಚುರುಕುಗೊಂಡ ಮುಂಗಾರು: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ಇಂದಿನಿಂದ ಮಳೆ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಕೊಡಗು ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಪ್ಪಳ, ರಾಯಚೂರು, ಗದಗ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular