ತುಮಕೂರು: 79ನೇ ಸ್ವಾತಂತ್ರ್ಯ ದಿನಾಚರಣೆ ಹಿನೆಲೆಯಲ್ಲಿ ದೇಶಾದ್ಯಂತ ಸಂಭ್ರಮ ಸಡಗರ ಮನೆ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇಸಿದ್ದಾರೆ. ಇದೇ ವೇಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವಿಸಿದರು.
ತುಮಕೂರು ನಗರದ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಧ್ವಜಾರೋಹಣ ನೆರವೇರಿಸಿದರು. ನಂತರ ತೆರೆದ ವಾಹನದಲ್ಲಿ ತೆರಳಿ ತುಕಡಿಗಳ ಪರಿವೀಕ್ಷಣೆ ನಡೆಸಿದರು.
ಸಶಸ್ತ್ರ ಮೀಸಲು ಪಡೆ, ಪೊಲೀಸ್ ತಂಡ, ನಾಗರಿಕ ಪೊಲೀಸ್ ತಂಡ, ಗೃಹರಕ್ಷಕ ದಳ, ಎನ್ ಸಿಸಿ ಬಾಲಕರ ತಂಡ, ಕಲ್ಪತರು ಪಡೆ, ಪೊಲೀಸ್ ವಾದ್ಯ ವೃಂದ ಒಳಗೊಂಡಂತೆ ವಿವಿಧ ತಂಡಗಳು ಕವಾಯತಿನಲ್ಲಿ ಭಾಗವಹಿಸಿದ್ದವು.