ಬೆಂಗಳೂರು : ಬೆಂಗಳೂರಿನ ಚಿನ್ನಯ್ಯಪಾಳ್ಯದಲ್ಲಿ ನಡೆದ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. ಘಟನೆ ಬಗ್ಗೆ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು. ಓರ್ವ ಬಾಲಕ ಮೃತಪಟ್ಟು 12 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಒಂದು ಸಿಲಿಂಡರ್ ಸ್ಪೋಟಕ್ಕೆ 10 ಮನೆಗಳು ಛಿದ್ರ ಛಿದ್ರವಾಗಿದೆ ಎನ್ನಲಾಗಿದೆ .ಸಿಲಿಂಡರ್ ಸ್ಪೋಟಕ್ಕೆ ಓರ್ವ ಮಹಿಳೆಯ ಕಾಲು ಕೂಡ ಕಟ್ ಆಗಿದೆ.
ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಮುಬಾರಕ್ (8) ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಸ್ತೂರಿ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಒಂದು ಸಿಲಿಂಡರ್ ಸ್ಪೋಟಗೊಂಡು 6 ಮನೆ ಛಿಧ್ರ ಛಿದ್ರವಾಗಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.