ದಾವಣಗೆರೆ: ಭಾರಿ ಮಳೆಗೆ ಮನೆ ಕುಸಿದು ವೃದ್ಧ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ನಗರದ ಮೆಹಬೂಬ್ ನಗರದಲ್ಲಿ ನಡೆದಿದೆ.
ಬುಡೇನ್ ಸಾಬ್(85) ಹಾಗೂ ನೂರ್ ಜಹಾನ್ (76) ಗಂಭೀರವಾಗಿ ಗಾಯಗೊಂಡಿರುವ ದಂಪತಿ. ಇಬ್ಬರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಅಖಲಿಸಲಾಗಿದೆ.
ಧಾರಾಕಾರ ಮಳೆಯಿಂದಾಗಿ ಏಕಾಏಕಿ ಮನೆ ಕುಸಿದು ಬಿದ್ದು ಈ ಘಟನೆ ಸಂಭವಿಸಿದೆ. ಆಜಾದ್ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.