ಕಾರವಾರ: ಕೂಲಿ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಸಲಾಕೆಯಿಂದ ಹೊಡೆದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಮಾಟಗೇರಿಯಲ್ಲಿ ನಡೆದಿದೆ.
ಕಮಾಟಗೇರಿಯ ರವೀಶ ಗಣಪತಿ ಚನ್ನಯ್ಯ (40) ಕೊಲೆಯಾದ ವ್ಯಕ್ತಿ. ಕಮಾಟಗೇರಿಯ ಮಂಜುನಾಥ ಬಸ್ಯಾ ಚನ್ನಯ್ಯ ಕೊಲೆ ಮಾಡಿರುವ ಆರೋಪಿ. ದಿನಗೂಲಿ ಹಣಕ್ಕಾಗಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ರವೀಶ ಗಣಪತಿ, ಮಂಜುನಾಥ್ ಬಸ್ಯಾನನ್ನು ಕೆಲಕ್ಕೆ ಕರೆತಂದಿದ್ದ. ಈ ವೇಳೆ ಜಗಳ ನಡೆದು ಮಂಜುನಾಥ್ ಬಸ್ಯಾ, ರವೀಶನ ಮೇಲೆ ಸಲಾಕೆಯಿಂದ ಹಲ್ಲೆ ನಡೆಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸದ್ಯ ಪೊಲೀಸರು ಆರೋಪಿ ಮಂಜುನಾಥ್ ನನ್ನು ಬಂಧಿಸಿದ್ದಾರೆ. ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.