ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್, ಗ್ರೂಪ್-ಸಿ, RRB & SSC ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ. ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ (https://sevasindhuservices.karnataka.gov.in) ಅರ್ಜಿಗಳನ್ನು ಆಹ್ವಾನಿಸಿದ್ದು, ಆ.11 ರವರೆಗೆ ವಿಸ್ತರಿಸಿ ಕೊನೆಯ ದಿನಾಂಕ ನಿಗಧಿಪಡಿಸಲಾಗಿತ್ತು.
ಸದರಿ ತರಬೇತಿಗೆ “ಸೇವಾ ಸಿಂಧು ಪೋರ್ಟಲ್”ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಆ.26 ರವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ನಲ್ಲಿ ಸದರಿ ದಿನಾಂಕದ ವರೆಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/ 08172-267373 ಗೆ ಸಂಪರ್ಕಿಸಬಹುದಾಗಿದೆ. ಅಥವಾ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪಿರ್ಕಿಸಬಹುದಾಗಿದೆ. ಅಥವಾ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.