ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು, ಕುರಿ & ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸೆಪ್ಟೆಂಬರ್ 8 ರಿಂದ ತರಬೇತಿಯು ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ತಿಳಿಸಿದ್ದಾರೆ.